ನ್ಯಾಯಾಧೀಶರ ಮನೆಯಲ್ಲಿಯೇ ಚಿನ್ನಾಭರಣ ಕಳವು!

ಬೀದರ್:

   ನ್ಯಾಯಾಧೀಶರ  ಮನೆಯಿಂದಲೇ ಸುಮಾರು 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ್ದಾರೆ. ಈ ಕಳವು  ಘಟನೆ ಬೀದರ್  ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ನಡೆದಿದೆ. ಬೀದರ್‌ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್‌ಸಿ  ನ್ಯಾಯಾಧೀಶರಾದ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ.

    ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದಾಗ ಒಳನುಗ್ಗಿದ ಕಳ್ಳರು ಗುಂಪು ಬರೋಬ್ಬರಿ 7,61,800 ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಯಾಧೀಶರು ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.