ಮಾನನಷ್ಟ ಮೊಕದ್ದಮೆ : ತೇಜಸ್ವಿ ಯಾದವ್‌ ಗೆ ಕೋರ್ಟ್‌ ಸಮನ್ಸ್

ಅಹಮದಾಬಾದ್:

     ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

    ಸಮನ್ಸ್‌ ಪ್ರಕಾರ, ಯಾದವ್ ಅವರು ಅಕ್ಟೋಬರ್ 13 ರಂದು ನ್ಯಾಯಾಲಯದ ಮುಂದೆ ಹಾಜರಾಗ ಬೇಕಾಗುತ್ತದೆ. ಗುಜರಾತಿಗಳು ಕಳ್ಳರು (ವಂಚಕರು) ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆಗಸ್ಟ್ 28ರಂದು ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಡಿಜೆ ಪರ್ಮಾರ್ ಸಮನ್ಸ್ ಜಾರಿ ಮಾಡಿದ್ದರು.

    ಐಪಿಸಿ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸೆಪ್ಟೆಂಬರ್ 22 ರಂದು ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆರ್‌ಜೆಡಿ ಹಿರಿಯ ನಾಯಕನಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯವು ವಿಚಾರಣೆಯನ್ನು ಪ್ರಾರಂಭಿಸಿದಾಗ, ಸಮನ್ಸ್ ಇನ್ನೂ ನ್ಯಾಯಾಲಯದಲ್ಲಿದೆ ಮತ್ತು ಅದನ್ನು ಯಾದವ್‌ಗೆ ತಲುಪಿಸಿಲ್ಲ ಎಂಬುದು ತಿಳಿದುಬಂದಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap