ಬೆಂಗಳೂರು:
ಈಗ ಮತ್ತು ಮುಂದಿನ ಶತಮಾನಗಳ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರ ಪ್ರಮುಖ ಪಾತ್ರ ವಹಿಸಲಿದೆ, ಇದರಿಂದ ಇಂಧನ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತವು ಇಂದು ಪ್ರಬಲವಾದ ಧ್ವನಿಗಳಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.
ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರನ್ನು ಕೊಂಡಾಡಿದರು.
Addressing the #IndiaEnergyWeek 2023 in Bengaluru. https://t.co/CmpRrAJiDC
— Narendra Modi (@narendramodi) February 6, 2023
ಇದು ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ. ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದಾಗಿದೆ ಎಂದು ಹೇಳಿದರು.
ಐಎಂಎಫ್ 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (ಬ್ರೈಟ್ ಸ್ಪಾಟ್) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ.
ಭಾರತದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಲ್ಲ ಸ್ಥಿರ ಸರ್ಕಾರವಿದೆ. ಹೀಗಾಗಿಯೇ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಪೂರಕವಾಗುವ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಮಹತ್ವದ ಬದಲಾವಣೆಗಳು ಕಂಡು ಬಂದಿವೆ. ಅವುಗಳ ಫಲಾನುಭವಿಗಳ ಸಂಖ್ಯೆಯು ಹಲವು ಅಭಿವೃದ್ಧಿ ಹೊಂದಿದ ದೇಶಗಳ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚಾಗಿದೆ ಎಂದು ತಿಳಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ