ನವದೆಹಲಿ:
ಇಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮೇ 24, 2023ರಂದು ವಿಧಾನಸಭೆಯ ಕಾಲಾವಧಿ ಮುಕ್ತಾಯಗೊಳ್ಳಲಿದೆ.ಅದರೊಳೆಗೆ ಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಕ್ತಾಯಗೊಳಿಸ ಲಾಗುತ್ತದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ 36 ಎಸ್ಸಿ ಮೀಸಲು ಕ್ಷೇತ್ರ, 15 ಎಸ್ಟಿ ಮೀಸಲು ಕ್ಷೇತ್ರಗಳಾಗಿದ್ದಾವೆ ಎಂದರು.
5.2 ಕೋಟಿ ಮತದಾರರು ಕರ್ನಾಟಕದಲ್ಲಿ ಇದ್ದಾರೆ. ಇವರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೇ, 2.5 ಮಹಿಳಾ ಮತದಾರರು ಇದ್ದಾರೆ. 80 ವರ್ಷ ಮೇಲ್ಪಟ್ಟ 12.15 ಲಕ್ಷ ಮತದಾರರಿದ್ದಾರೆ. ಅವರಿಗೂ ಅವಕಾಶ ನೀಡಲಾಗುತ್ತಿದೆ. 2.55 ಲಕ್ಷ ಅಂಗವಿಕಲ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
