ನವದೆಹಲಿ:
ಸಭೆ ಮುಗಿಸಿ ದೆಹಲಿಗೆ ವಾಪಸಾದ ಕೆಲವೇ ನಿಮಿಷಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಕಾಂಗ್ರೆಸ್ ಧೋರಣೆಯನ್ನು ಖಂಡಿಸಿ ಒಡಕಿನ ಮಾತುಗಳನ್ನೂ ಆಡಿದ್ದಾರೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸದಿದ್ದರೆ ಪ್ರತಿಪಕ್ಷಗಳ ಮುಂದಿನ ಸಭೆಗೆ ಪಕ್ಷ ಭಾಗವಹಿಸುವುದು ಕಷ್ಟ ಎಂದು ವಿಪಕ್ಷ ಕೂಟಕ್ಕೆ ಎಎಪಿ ನಾಯಕರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಕುರಿತು ಮಾತನಾಡಿದ ಬಿಜೆಪಿ ಹಿರಿಯ ಸಂಸದ ರವಿಶಂಕರ್ ಪ್ರಸಾದ್, ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಸೇರಿದಂತೆ ಎಲ್ಲರೂ ಹಗಲುಗನಸು ಕಾಣುತ್ತಿದ್ದಾರೆ. ಅವರ (ವಿರೋಧ) ಮೈತ್ರಿಕೂಟ ಎಷ್ಟು ಪ್ರಬಲವಾಗಲಿದೆ ಎಂಬುದನ್ನು ನಾವು ನೋಡುತ್ತೇವೆ ಎಂದರು.
ವಿಪಕ್ಷಗಳ ಮೈತ್ರಿಕೂಟ ರಚನೆಯಿಂದ ಅವರಿಗೆ ಯಾವುದೇ ರಾಜಕೀಯ ಲಾಭ ಆಗಲ್ಲ, ಇದು ಎಷ್ಟು ದಿನ ಉಳಿಯುತ್ತದೆ ಎಂಬುದು ಸಹ ಖಚಿತವಾಗಿಲ್ಲ. ಕೇಜ್ರಿವಾಲ್ ಈಗಾಗಲೇ ಓಡಿ ಹೋಗಿದ್ದಾರೆ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








