ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ : ರಾಹುಲ್ ಗಾಂಧಿ

ನವದೆಹಲಿ 

     ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಭಾಷಣದಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಫೋನ್‌ ಸೇರಿದಂತೆ ಹಲವು ರಾಜಕೀಯ ನಾಯಕರ ಪೋನ್‌ಗಳಲ್ಲಿ ಪೆಗಾಸಸ್ ವೈರಸ್ ಇತ್ತು ಎಂದು ಹೇಳಿದ್ದಾರೆ.

    “ಈ ಬಗ್ಗೆ ಗುಪ್ತಚರ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ಫೋನ್‌ನಲ್ಲಿ ಏನು ಹೇಳುತ್ತೀರೋ ಅದರ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕರೆಗಳನ್ನು ನಾವು ರೆಕಾರ್ಡ್ ಮಾಡುತ್ತಿದ್ದೇವೆ ಎಂದು ಹೇಳಿದ್ದರು” ಎಂದು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಪೆಗಾಸಸ್ ಬೇಹುಗಾರಿಕೆ ಕುತಂತ್ರಾಂಶವನ್ನು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಮುಂದುವರಿದು, “ಇದ್ದರಿಂದ ನಮ್ಮ ಮೇಲೆ ನಿರಂತರ ಒತ್ತಡವಿದೆ. ಪ್ರತಿಪಕ್ಷಗಳ ವಿರುದ್ಧ ಪ್ರಕರಣ ಗಳು ದಾಖಲಾಗಿವೆ. ಕ್ರಿಮಿನಲ್ ಮೊಕದ್ದಮೆಗಳ ಅಡಿಯಲ್ಲಿ ಇರಬಾರದ ವಿಷಯಗಳಿಗಾಗಿ ನನ್ನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಡಿಸಿದ್ದಾರೆ.

” ಈ ರೀತಿ ಮಾಧ್ಯಮದ ಮೇಲೆ ಮತ್ತು ಪ್ರಜಾಪ್ರಭುತ್ವದ ಮೇಲೆ ನೀವು ಈ ರೀತಿಯ ಆಕ್ರಮಣ ನಡೆಸಿದರೇ, ಪ್ರತಿಪಕ್ಷವಾಗಿ, ಒಂದು ಮಾಧ್ಯಮವಾಗಿ ಜನರೊಂದಿಗೆ ಸಂವಹನ ನಡೆಸುವುದು ತುಂಬಾ ಕಷ್ಟ” ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ವಿದೇಶದಲ್ಲಿ ಮತ್ತೆ ದೇಶದ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link