ಮೈಸೂರು
ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಚುನಾವಣಾ ತಂತ್ರಗಾರಿಕೆಯಲ್ಲಿರುವ ರಾಜಕೀಯ ಪಕ್ಷಗಳು ಹಲವು ಸಮೀಕ್ಷೆಗಳನ್ನ ನಡೆಸಿದ್ದು, ಹಲವು ಸಮೀಕ್ಷೆಗಳಲ್ಲಿ ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಬರುವುದಿಲ್ಲ ಎಂದು ತಿಳಿದು ಬಂದಿದ್ದು, ಚುನಾವಣೆಗೂ ಮೊದಲೇ ರಾಜ್ಯ ರಾಜಕೀಯದಲ್ಲಿ ಮೈತ್ರಿ ಮಾತುಕತೆ ಜೋರಾಗಿದೆ.
ಈ ಕುರಿತು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ, ಬಿಜೆಪಿ ಅಥವಾ ಕಾಂಗ್ರೆಸ್ ಜತೆ ಸೇರಿ ಮೈತ್ರಿ ಸರ್ಕಾರ ರಚಿಸುವ ಇಚ್ಛೆ ನನಗೆ ಇಲ್ಲ. ರಾಜ್ಯಾದ್ಯಂತ ಪಂಚರತ್ನ ಯಾತ್ರೆ ವೇಳೆ ಭಾಗವಹಿಸುತ್ತಿರುವ ಜನಸ್ತೋಮ ನೋಡಿದರೆ ಈ ಬಾರಿ ರಾಜ್ಯದ ಜನತೆ ಬಹುಮತ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ನವಂಬರ್ ತಿಂಗಳಿನಲ್ಲಿ ಕೋಲಾರದಲ್ಲಿ ಆರಂಭವಾದ ಪಂಚರತ್ನ ರಥಯಾತ್ರೆ ರಾಜ್ಯಾದ್ಯಂತ ಐದು ತಿಂಗಳ ಕಾಲ ಸಂಚರಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಉಚಿತ ಆರೋಗ್ಯ ಶಿಕ್ಷಣ ಉದ್ಯೋಗ ಸೇರಿದಂತೆ ಕೃಷಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ನೂತನ ಯೋಜನೆಗಳನ್ನು ಆರಂಭಿಸಿ ರೈತರು ಕಾರ್ಮಿಕರು ಸೇರಿದಂತೆ ಸಮಾಜದ ವಿವಿಧ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಥಯಾತ್ರೆ ಸಂದರ್ಭ ಮತದಾರರ ಅಭೂತಪೂರ್ವ ಬೆಂಬಲ ನೋಡಿದರೆ ಮುಂದಿನ ಬಾರಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸವಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ