ಬೆಂಗಳೂರು : ನಮ್ಮ ರಾಜ್ಯಕ್ಕೂ ಅಮೇರಿಕ ವೀಸಾ ಕಛೇರಿ ಅಗತ್ಯವಿದೆ : ಸಿಎಂ

ಬೆಂಗಳೂರು: 

    ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಯಾದರು . ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ತಿಳಿಸಿದರು.

   ಪ್ರಸ್ತುತ ವೀಸಾ ಕಚೇರಿ ಚೆನ್ನೈನಲ್ಲಿರುವುದರಿಂದ ಬೆಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣಿಸುವವರಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ವಿದೇಶಿಗರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನ ಅಮೆರಿಕಕ್ಕೆ ಪ್ರಯಾಣ ಬೆಳೆಸುವುದರಿಂದ , ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ವೀಸಾ ಕಚೇರಿಯನ್ನು ತೆರೆಯುವಂತೆ ಆಗ್ರಹಿಸಿದರು.

  ಬೆಂಗಳೂರಿನಲ್ಲಿರುವ ಅಮೇರಿಕದ ಸಂಸ್ಥೆಗಳಿಗೆ ಎಲ್ಲ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ಒದಗಿಸುತ್ತಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳನ್ನು ಸ್ಥಾಪಿಸಲು ಅತ್ಯುತ್ತಮ ವಾತಾವರಣವಿದೆ. ಹಾಗಾಗಿ, ವಿದೇಶಿ ಬಂಡವಾಳ ಹೂಡಿಕೆ ರಾಜ್ಯದಲ್ಲಿ ಹೆಚ್ಚಾಗಿದೆ. ಬೆಂಗಳೂರು ಭವಿಷ್ಯದ ನಗರ. ಆದ್ದರಿಂದ ಬೆಂಗಳೂರಿನಲ್ಲಿ ವೀಸಾ ಕಚೇರಿಯ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಮನವರಿಕೆ ಮಾಡಿಕೊಟ್ಟರು.

 

Recent Articles

spot_img

Related Stories

Share via
Copy link
Powered by Social Snap