ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ರಾಯಣ್ಣನ ಹೆಸರಿಡಲು ಚಿಂತನೆ : ಎಂಬಿ ಪಾಟೀಲ್‌

ಹುಬ್ಬಳ್ಳಿ:

     ಶಿವಮೊಗ್ಗದ ಸೋಗಾನೆ ಬಳಿಯಿರುವ ವಿಮಾನ ನಿಲ್ದಾಣಕ್ಕೆ ಈಗಾಗಲೇ ಕುವೆಂಪು ಹೆಸರಿಡಲು ತೀರ್ಮಾನ ಮಾಡಲಾಗಿದೆ. ಆದರೆ ಇನ್ನೂ ಘೋಷಣೆ ಆಗಿಲ್ಲ ಅಷ್ಟೇ. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಬೃಹತ್ ಪ್ರಮಾಣದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದ‌ ಬೆನ್ನಲ್ಲೇ ಸಾಕಷ್ಟು ಹುಬ್ಬಳ್ಳಿಯ ಜನತೆಯಲ್ಲಿ ಆಶೆ ಈ ಭಾಗದಲ್ಲಿ ಗರಿಗೆದರಿದೆ.

    ವಿಮಾನ ನಿಲ್ದಾಣಗಳ ಮರು ನಾಮಕರಣದ ಕುರಿತು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡುವುದಾಗಿ ಸಹ ತಿಳಿದುಬಂದಿದೆ.

    ಶಾಸಕರುಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಬೇಕು ಎಂದು ಹಲವು ದಿನಗಳಿಂದ ಬೇಡಿಕೆಯಿದೆ. ಹಾಗೂ ಸರ್ಕಾರಕ್ಕೆ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಕೆ ಆಗಿದೆ ಎಂದು ತಿಳಿಸಿದ್ದಾರೆ.

    ಯಾವ ನಗರದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದೋ ಆ ನಗರದ ಹೆಸರನ್ನು ಇಡುವುದು ಅಭ್ಯಾಸ ಆಗಿದೆ. ಅಂತಹ ಹೆಸರನ್ನು ಬದಲಾ ಯಿಸುವುದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಹೇಳಿದರು.

    ರಾಜ್ಯ ಸರ್ಕಾರವು ರಾಜ್ಯದ ಯಾವುದೇ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡಲು ಬಯಸಿದರೆ, ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಈ ಕುರಿತು ನಿರ್ಣಯವನ್ನು ಮಂಡಿಸಿ ಅಂಗೀಕರಿಸಬೇಕು ಮತ್ತು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಅದರಂತೆ ಈಗ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಇಡಬೇಕು ಎಂಬ ಜಿಜ್ಞಾಸೆ ಇತ್ತು.

    ಈಗ ಸರ್ಕಾರದ ನಿಲುವು ಸ್ಪಷ್ಟವಾಗಿದೆ.ಇನ್ನು ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾವನೆ ಮಂಡಿಸಿ ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂಬ ಸಚಿವ ಎಂ ಬಿ ಪಾಟೀಲ್ ಅವರ ನಿರ್ಣಯ ಸ್ವಾಗತಾರ್ಹವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap