ಕರ್ನಾಟಕ
ರಾಜ್ಯದ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಮಳೆರಾಯ ಆರ್ಭಟಿಸಲಿದ್ದು, ಇನ್ನು ಕೆಲವೆಡೆ ಒಣಹವೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಮಳೆ ಪಡೆಯಲಿರುವ ಜಿಲ್ಲೆಗಳು ಮತ್ತು ಯಾವ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ಈಗಾಗಲೇ ಒಂದು ವಾರದ ಹಿಂದೆಯೆಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಆದರೆ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಬಿಡುವು ನೀಡಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ನಗರದಲ್ಲಿ ಮತ್ತೆ ಇಂದು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಮೇ 20) ಗುಡುಗು, ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೆ ನಗರದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚು, ಸಿದ್ದರಾಮಯ್ಯ, ಡಿ.ಕೆ.ಶಿ ಪ್ರಮಾಣ ವಚನಕ್ಕೆ ವರುಣನ ಅಡ್ಡಿ ಆತಂಕ ಹಾಗೆಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆ ಸುರಿಯಲಿದೆ. ಅಲ್ಲದೆ ದಕ್ಷಿಣ ಒಳನಾಡಿನಲ್ಲಿ ಮೇ 20 ಮತ್ತು 21ರಂದು ಮಳೆ ಸುರಿಯುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಮುಚ್ಚಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆ ಆಗಲಿದೆ ಎನ್ನುವ ಮಾಹಿಯನ್ನು ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ