ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಂಡಾಯ…!

ಬೆಂಗಳೂರು

    ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 17ರಷ್ಟು ಹೆಚ್ಚಿಸಿ ಆದೇಶ ಹೊರಡಿಸುತ್ತಿದ್ದಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಅದಕ್ಕೆ ಒಪ್ಪಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಂಡಾಯ ಎದುರಾಗಿದೆ.

    ಆದರೆ ಇದಕ್ಕೆ ವಿಧಾನಸೌಧದ ಸಚಿವಾಲಯ ಸಿಬ್ಬಂದಿಯಿAದ ಈ ತೀರ್ಮಾನಕ್ಕೆ ವಿರೋಧ ವ್ಯಕ್ತವಾಗಿದೆ. ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಬಹಳ ಆತುರವಾಗಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದು ಕೊಂಡಿದ್ದಾರೆ. ಎಲ್ಲರ ಅಭಿಪ್ರಾಯವನ್ನು ಪಡೆದುಕೊಂಡ ನಿರ್ಧಾರಕ್ಕೆ ಬಂದಿಲ್ಲ. ಸರ್ಕಾರದ ಮುಂದೆ ಸರಿಯಾದ ವಾದ ಮುಂದಿಡುತ್ತಿದ್ದರೆ ಶೇಕಡಾ 25ರವರೆಗೆ ವೇತನ ಹೆಚ್ಚಿಸಲು ಮುಂದಾಗುತ್ತಿತ್ತು ಎಂದು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಹೇಳಿದ್ದಾರೆ.

    ನಾವು ಈ ಆದೇಶವನ್ನು ಒಪ್ಪಲು ಸಾಧ್ಯವಿಲ್ಲ. ನಾಳೆ ನಾವು ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ರಾಜ್ಯ ಸರ್ಕಾರಿ ನೌಕರರು ನೂರಕ್ಕೆ ನೂರರಷ್ಟು ಮೋಸಹೋಗಿದ್ದೇವೆ. ಶೇಕಡಾ 17ರಷ್ಟು ಮಧ್ಯಂತರ ವೇತನ ಹೆಚ್ಚಳವನ್ನು ಏಪ್ರಿಲ್ ನಿಂದ ಹೆಚ್ಚಿಸುತ್ತೇವೆ ಎನ್ನುವುದು ಮೂಗಿಗೆ ತುಪ್ಪ ಸವರಿದಂತೆ. ಇದನ್ನು ವಿಧಾನಸಭೆ, ವಿಧಾನಪರಿಷತ್, ಸಚಿವಾಲಯ ಸಿಬ್ಬಂದಿ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

     ಸರ್ಕಾರದ ಮುಂದೆ ವೇತನ ಹೆಚ್ಚಳಕ್ಕಿಂತ ಒಪಿಎಸ್ ಜಾರಿ ನಮ್ಮ ಮುಖ್ಯ ಬೇಡಿಕೆಯಾಗಿತ್ತು. ನೂತನ ಪಿಂಚಣಿ ಸರ್ಕಾರಿ ನೌಕರರಿಗೆ ಮಾರಕವಾಗಿದೆ ಎಂದರು.ಇದಕ್ಕೆ ಪ್ರತಿಕ್ರಿಯಿಸಿರುವ ನೌಕರರ ಸಂಘ ಅಧ್ಯಕ್ಷ ಷಡಕ್ಷರಿ, ಗುರುಸ್ವಾಮಿ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಲ್ಲ, ಅವರು ಹಂಗಾಮಿ ಅಧ್ಯಕ್ಷರಷ್ಟೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap