ತುಮಕೂರು:
ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೂಕ್ತ ಮುಂಜಾಗ್ರತಾ ಕ್ರಮ ವಹಿಸಲು ಶಾಲಾ ಸಿಬ್ಬಂದಿಗೆ ಸೂಚಿಸಲಾಗಿದೆ ಹೊರತು ಸದ್ಯ ಶಾಲಾ-ಕಾಲೇಜಿಗೆ ರಜೆ ನೀಡುವ ಚಿಂತನೆ ನಡೆದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.
ನಗರದ ಅಶೋಕನಗರದಲ್ಲಿ ಜಿಲ್ಲಾ ಬಿಜೆಪಿನೂತನ ಕಚೇರಿ ಪ್ರಾರಂಭೋತ್ಸವದಲ್ಲಿ ಭಾಗಿಯಾದ ಸಚಿವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಧಾರವಾಡದ ಎಸ್ ಡಿ ಎಂಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಉಳಿದಂತೆ ಯಾರಿಗೂ ಪಾಸಿಟಿವ್ ಬಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಮುಂದೆ ಏನಾದರೂ ಕ್ರಮ ಕೈಗೊಳ್ಳಬೇಕಾದರೆ ಆಗ ತೆಗೆದುಕೊಳ್ಳುತ್ತೇವೆಂದರು.
ಸಿಎಂ ನೇತೃತ್ವದಲ್ಲಿ ಸಭೆ ನಡೆದು ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುತ್ತಿದೆ. ಪೆÇೀಷಕರು ಯಾವುದೇ ರೀತಿಯ ಆತಂಕ ಬೇಡ..ಶಾಲಾ ಅವಧಿಯಲ್ಲಿ ಸಂಪೂರ್ಣ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಗಿದೆ.ಕೇರಳಾದಿಂದ ಬರುವವರ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ.. ಮಂಗಳೂರು ಭಾಗದಲ್ಲೂ ವಿಶೇಷವಾಗಿ ನಿಗಾವಹಿಸಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಬಿಜೆಪಿ ಮುಖಂಡರಾದ ಹೆಬ್ಬಾಕರವಿ, ಬಿ.ಕೆ.ಮಂಜುನಾಥ್, ದಿಲೀಪ್, ಪಾಲಿಕೆ ಬಿಜೆಪಿ ಸದಸ್ಯರುಗಳು,ಪಕ್ಷದ ಮುಖಂಡರು, ವಕ್ತಾರರಾದ ಕೊಪ್ಪಲ್ ನಾಗರಾಜ್, ಶಿವಕುಮಾರ್ ಮತ್ತಿತರರಿದ್ದರು.
ಬಿಜೆಪಿ ಅಭ್ಯರ್ಥಿ ನೂತನ ಕಚೇರಿಗೆ ಭೇಟಿ:
ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಎನ್. ಲೋಕೇಶ್‍ಗೌಡ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಅವರೊಡಗೊಡಿ ನೂತನ ಕಚೇರಿಗೆ ಭೇಟಿಕೊಟ್ಟುಕಾರ್ಯಕರ್ತರು, ಮುಖಂಡರೊಂದಿಗೆ ಸಮಾಲೋಚಿಸಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿಸಚಿವರು, ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಲಕ್ಷ್ಮೀಶ್, ನಗರ ಘಟಕದ ಹನುಮಂತರಾಜು ಸೇರಿ ಬಿಜೆಪಿ ವಿವಿಧ ಪ್ರಕೋಷ್ಠಗಳ ಮುಖಂಡರು ಪೂಜಾ ಮಹೋತ್ಸವದಲ್ಲಿ ಪಾಲ್ಗೊಂಡರು. ಜಿಲ್ಲಾ ಬಿಜೆಪಿ ಕಚೇರಿ ಪ್ರಾರಂಭೋತ್ಸವದಲ್ಲಿ ಭಾಗಿಯಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್. ಜಿಲ್ಲಾ ಬಿಜೆಪಿ ಮುಖಂಡರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ