ಕರ್ನಾಟಕದಲ್ಲಿ ಹೆಚ್ಚುತ್ತಿದೆ ಕೇಂದ್ರ ನಾಯಕರ ಪ್ರಚಾರ..!

ಬೆಂಗಳೂರು: 

    ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

     ಶಾ ಅವರು ಶಿವಮೊಗ್ಗ ನಗರಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ರೋಡ್ ಶೋ ನಡೆಸಲಿದ್ದಾರೆ. ಕಳೆದ ವರ್ಷ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಕೋಮುಗಲಭೆ ನಡೆದಿತ್ತು. ಫೆಬ್ರುವರಿ 2022ರಲ್ಲಿ ನಗರವು ಎಂಟು ದಿನಗಳಿಗಿಂತ ಹೆಚ್ಚು ಕಾಲ ಕರ್ಫ್ಯೂ ಹೇರಿಕೆಯನ್ನು ಕಂಡಿತ್ತು.

     ಸಂಜೆ ಅಮಿತ್ ಶಾ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಪ್ಪ ನಾಯ್ಕ ವೃತ್ತದಲ್ಲಿ ಆರಂಭವಾಗಿ ಲಕ್ಷ್ಮಿ ಟಾಕೀಸ್ ಬಳಿ ರೋಡ್‌ಶೋ ಕೊನೆಗೊಳ್ಳಲಿದೆ. ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿದ್ದ ಪಕ್ಷ, ಈಶ್ವರಪ್ಪ ಅವರ ಬಲಗೈ ಬಂಟ ಚನ್ನಬಸಪ್ಪ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

   ಹಿರಿಯ ನಾಯಕ ವಿ ಸೋಮಣ್ಣ ಅವರನ್ನು ಬಿಜೆಪಿಯು ಕಣಕ್ಕಿಳಿಸಿರುವ ಚಾಮರಾಜನಗರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮತ್ತು ಖರ್ಗೆ ಮಾತನಾಡಲಿದ್ದಾರೆ.ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೂ ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ.ತುಳಿತಕ್ಕೊಳಗಾದ ವರ್ಗಗಳ ತನ್ನ ಮತ ಬ್ಯಾಂಕ್ ಅನ್ನು ಯಥಾಸ್ಥಿತಿಯಲ್ಲಿಟ್ಟುಕೊಳ್ಳುವುದು ಕಾಂಗ್ರೆಸ್ ತಂತ್ರವಾಗಿದೆ.

    ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಪರ 18 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap