ಚಿಕ್ಕಮಗಳೂರು :
‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ, ಎಲ್ಲರೂ ಬೇಗ ಅರ್ಜಿ ಸಲ್ಲಿಸಿ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದರು.
ದರೆ ಎಲ್ಲರೂ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು . ಜೂನ್ ತಿಂಗಳ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಅರ್ಜಿ ಹಾಕದಿದ್ರೆ ಉಚಿತ ವಿದ್ಯುತ್ ಇಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದರು.
ಜೂನ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ. , ಜುಲೈ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದ್ರೆ ಆಗಸ್ಟ್ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಉಚಿತ ವಿದ್ಯುತ್ ನೀಡುವುದಿಲ್ಲ, ಬಾಕಿ ಹಣವನ್ನು ಕಟ್ಟಲೇಬೇಕು ಎಂದು ಇಂಧನ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. 200 ಯೂನಿಟ್ ಗಿಂತ ಹೆಚ್ಚುವರಿ ಯೂನಿಟ್ ಗಳಿಗೆ ಮಾತ್ರ ಕರೆಂಟ್ ಬಿಲ್ ಕಟ್ಟಬೇಕು . ನಿನ್ನೆ ಮಧ್ಯರಾತ್ರಿಯಿಂದಲೇ ಉಚಿತ ವಿದ್ಯುತ್ ಯೋಜನೆ ಜಾರಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ