ಮುಂಬೈ:
ಲೋಕಸಭಾ ಚುನಾವಣೆ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್, ಶಿವಸೇನೆ ಮತ್ತು ಎನ್ ಸಿಪಿ ಮೈತ್ರಿಕೂಟ ಮಹಾವಿಕಾಸ್ ಅಘಾಡಿ ಸೀಟು ಹಂಚಿಕೆ ಕುರಿತು ಮಹತ್ತರ ನಿರ್ಧಾರ ಕೈಗೊಂಡಿವೆ.
MVAಯ ಮೈತ್ರಿ ಪಾಲುದಾರರು ಮೈತ್ರಿಯಲ್ಲಿ ‘ದೊಡ್ಡ’ ಅಥವಾ ‘ಸಣ್ಣ’ ಸಹೋದರ ಎಂಬುದು ಇರುವುದಿಲ್ಲ. ಪ್ರತಿ ಪಕ್ಷವು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ರೈತ ಮತ್ತು ಕಾರ್ಮಿಕರ ಪಕ್ಷ ಮತ್ತು ರೈತ ನಾಯಕ ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಶೆಟ್ಕರಿ ಸಂಘಟನೆ ಮತ್ತು ಎಡ ಪಕ್ಷಗಳು ಸಭೆ ನಡೆಸಿವೆ.
ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಪಕ್ಷ ಅವರು ಎಂವಿಎ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದ್ದು, ಎಂವಿಎ ನಾಯಕರು ಅವರಿಗೂ ಅವಕಾಶ ಕಲ್ಪಿಸಲು ನಿರ್ಧರಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.
ಎಂವಿಎಯ ನಾಯಕ ಶರದ್ ಪವಾರ್ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಒಂದು ಸಭೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಸಭೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ 13 ಲೋಕಸಭಾ ಸಂಸದರು ಮತ್ತು ಒಬ್ಬ ಸ್ವತಂತ್ರ ಸಂಸದರೊಂದಿಗೆ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. ಹಾಗಾಗಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುವ ಕಾನೂನುಬದ್ಧ ಹಕ್ಕು ಕಾಂಗ್ರೆಸ್‌ಗೆ ಇದೆ. ಆದರೆ, ಮೈತ್ರಿಕೂಟದ ಹಿತಾಸಕ್ತಿಗಾಗಿ ಕೆಲವು ಸ್ಥಾನಗಳನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಾಗಿದ್ದೇವೆ.
ಬಿಜೆಪಿ (BJP) ನೇತೃತ್ವದ ಮಹಾಯುತಿಯು ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ (Maharashtra Assembly Elections) ತನ್ನ ಸೂತ್ರವನ್ನು ಇನ್ನೂ ಅಂತಿಮಗೊಳಿಸಿಲ್ಲ. ಬಿಜೆಪಿ 150 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 138 ಸ್ಥಾನಗಳನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ನಡುವೆ ಹಂಚಿಕೆ ಮಾಡಲಾಗುತ್ತದೆ.
ಶಿವಸೇನೆಯು 90 ರಿಂದ 100 ಸ್ಥಾನಗಳನ್ನು ಕೇಳುತ್ತಿದೆ ಮತ್ತು ಅಜಿತ್ ಪವಾರ್ 90 ಸ್ಥಾನಗಳನ್ನು ಕೇಳುತ್ತಿದ್ದಾರೆ. ಆದ್ದರಿಂದ ಮೂರೂ ಪಕ್ಷಗಳು ಈ ಸೀಟು ಹಂಚಿಕೆ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಎನ್ನಲಾಗಿದೆ.