ರಾಜ್ಯ ಸರ್ಕಾರಕ್ಕೆ ಹಣದ ಕೊರತೆ ಇಲ್ಲ : ಸಿಎಂ

ಬೆಂಗಳೂರು

    ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಬಬ್ಬೂರಿಗೆ  ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭಕ್ಕೆ ತೆರಳುವ ಮೊದಲು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮೊದಲಿನಿಂದಲೂ ನಾವು ಜಾತ್ಯತೀತರು ಎಂದು ಹೇಳುತ್ತ ಬಂದಿರುವ ಜೆಡಿಎಸ್ ರಾಜ್ಯದಲ್ಲಿ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ. ಇದರಿಂದ ಪಕ್ಷದ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದರು.

    ಇನ್ನು ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯ ಕುರಿತು ಮಾತನಾಡಿದ ಸಿಎಂ, ಶಿವಮೊಗ್ಗದಲ್ಲಿ ಮುಸ್ಲಿಂರು ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆ ವೇಳೆ ದುಷ್ಕರ್ಮಿಗಳು ಗಲಾಟೆ ಮಾಡಿದ್ದಾರೆ. ಪೊಲೀಸರಿಂದ ಈಗಾಗಲೇ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗೊದೆ. ಬಿಜೆಪಿ ಸತ್ಯಶೋಧನೆ ಸಮಿತಿ ಏನು ಶೋಧನೆ ಮಾಡುತ್ತದೆ? ಎಂದು ಪ್ರಶ್ನಿಸಿದರು.

    ಇನ್ನು ರಾಜ್ಯ ಸರ್ಕಾರಕ್ಕೆ ಹಣದ ಕೊರತೆ ಇಲ್ಲ. ಗ್ಯಾರಂಟಿ ಯೋಜನೆ, ಅಭಿವೃದ್ಧಿ ಯೋಜನೆಗೂ ಹಣದ ಕೊರತೆ ಇಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕ ರಾಜ್ಯದಲ್ಲಿ ಹಸಿರು ಬರ ಎದುರಾಗಿದೆ. ಹಸಿರು ಕಾಣುತ್ತದೆ ಆದರೆ ಬೆಳೆ ವಿಫಲವಾಗಿದೆ. ಶೇ.52%ರಷ್ಟು ಬರದಿಂದ ಬೆಳೆ ಹಾನಿ ಆಗಿದೆ. ಕೇಂದ್ರ ಅಧ್ಯಯನ ತಂಡದಿಂದ ವಸ್ತು ಸ್ಥಿತಿ ಅಧ್ಯಯನಕ್ಕೆ ಸೂಚನೆ ನೀಡಲಾಗಿದೆ. 4860 ಕೋಟಿ ರೂಪಾಯಿಯ ಬೆಳೆ ಪರಿಹಾರ ಕೇಳಿದ್ದೇವೆ ಎಂದು ಹೇಳಿದರು.

   ಮೂರೂವರೆ ವರ್ಷಗಳ ಆಡಳಿತದಲ್ಲಿ ವೆಚ್ಚಕ್ಕೆ ಮಿತಿ ಹಾಕದೆ ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಾಳು ಮಾಡಿದ್ದು ಬಿಜೆಪಿ ಎಂದು ಆರೋಪಿಸಿದರು. 2013 ಮತ್ತು 2018 ರ ನಡುವೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಪರಿಣಾಮಕಾರಿಯಾಗಿ ಆರ್ಥಿಕ ವ್ಯವಸ್ಥೆ ನಿರ್ವಹಿಸಲಾಯಿತು ಮತ್ತು ಸರ್ಕಾರವು ಎಂದಿಗೂ ಹೆಚ್ಚು ಸಾಲವನ್ನು ತೆಗೆದುಕೊಂಡಿಲ್ಲ ಎಂದರು.

Recent Articles

spot_img

Related Stories

Share via
Copy link
Powered by Social Snap