ವಿರೋಧಿಗಳನ್ನು ಮಣಿಸುವುದು ನನಗೆ ಅನಿವಾರ್ಯ : ಕುಮಾರಸ್ವಾಮಿ

ಬೆಂಗಳೂರು: 

    ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳುತ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ವಿರೋಧಿಗಳನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

   ರಾಮನಗರ ಕ್ಷೇತ್ರದ ನಾಯಕರ ಜೊತೆಗೆ ಎಚ್ ಡಿ ಕೆ ಸಭೆ ನಡೆಸಿದರು. ಸಿ.ಪಿ.ಯೋಗೇಶ್ವರ್ ಅವರು ಎನ್ ಡಿಎ ಅಭ್ಯರ್ಥಿ ಆಗಬೇಕು ಎಂದು ನಾನು ಹೇಳಿದ್ದೇನೆ. ಸ್ವತಃ ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಆದರೆ, ಯೋಗೇಶ್ವರ್ ಅವರು ಕೂಡ ಡಾ.ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಸಭೆಯಲ್ಲಿ ಹೇಳಿದರು. 2 ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

   ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಒತ್ತಾಸೆ ಇದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿವೆ, ಡಾ. ಮಂಜುನಾಥ್‌ ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದರು

   ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ. ರಾಮನಗರ ಜನರು ನಿಖಿಲ್ ರನ್ನು ಸೋಲಿಸಿದ್ದಾರೆ ಎಂದು ನಾನು ಆರೋಪ ಮಾಡಲ್ಲ. ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ ಎಂದರು. ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ.ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap