ಬೆಂಗಳೂರು:
ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಇದು ಆರೋಗ್ಯಕರ ಪ್ರಕ್ರಿಯೆಯಾಗಿದ್ದು, ಮೊದಲು ಚುನಾವಣೆ ಗೆಲ್ಲಬೇಕು, ನಂತರ ಈ ವಿಚಾರವಾಗಿ ಚರ್ಚೆ ಮಾಡಬಹುದು ಎಂದು ಶಶಿ ತರೂರ್ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ನನ್ನ ಅವಕಾಶವನ್ನು ಬಿಟ್ಟುಕೊಡುತ್ತೆನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ಸಂಬಂಧ ಪ್ರತಿಕ್ರಿಯಿರುವ ಶಶಿ ತರೂರ್, ಖರ್ಗೆ ಪಕ್ಷದ ಅತ್ಯಂತ ಗೌರವಾನ್ವಿತ ಅಧ್ಯಕ್ಷರು… ಅವರಿಗೆ ನಾವೆಲ್ಲರೂ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯ ಬಗ್ಗೆ ಚರ್ಚೆ ಮಾಡದಿರುವ ಸಂಪ್ರದಾಯ ಕಾಂಗ್ರೆಸ್ಸಿಗಿದೆ, ಇದು ಆರೋಗ್ಯಕರ ಅಭ್ಯಾಸವಾಗಿದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.