ಬೆಂಗಳೂರು
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರಿತ ನೌಕರರನ್ನು ಖಾಯಂ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಧಾನಸಭೆಯಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಅವರು, 21 ಸಾವಿರದ 542 ಗುತ್ತಿಗೆ ಆಧಾರಿತ ನೌಕರರು ಹಾಗೂ 3 ಸಾವಿರದ 494 ಹೊರಗುತ್ತಿಗೆ ಆಧಾರಿತ ನೌಕರರನ್ನು ಖಾಯಂಗೊಳಿಸುವುದಿಲ್ಲ ಎಂದರು.
ಮತ್ತೊಂದು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಕಲ್ಯಾಣ ಕರ್ನಾಟಕದ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಈ ಆಸ್ಪತ್ರೆ ಹೆಚ್ಚಳ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು. ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವೈದ್ಯರಲ್ಲಿ ಸೇವಾ ಮನೋಭಾವದ ಕೊರತೆಯಿಂದ ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸಲು ಹೋಗಲು ಆಸಕ್ತಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ