ದೇಶದಲ್ಲಿ ವಿದ್ಯುತ್ ಕೊರತೆ ಇಲ್ಲ : ಕೃಷ್ಣಪಾಲ್ ಗುರ್ಜರ್

ಮೈಸೂರು : 

     ದೇಶದಲ್ಲಿ ವಿದ್ಯುತ್ ಕೊರತೆ ಇಲ್ಲ ಎಂದು ಕೇಂದ್ರ ವಿದ್ಯುತ್ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಅಗತ್ಯ ಪೂರೈಸುವಷ್ಟು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

    ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯುತ್ ಪ್ರಸರಣದಲ್ಲಿ ಕಾಣಿಸಿಕೊಂಡಿರುವ ತಾಂತ್ರಿಕ ದೋಷವನ್ನು ಸರಿಪಡಿಸಲು ಕೇಂದ್ರ ಸರ್ಕಾರ 3 ಲಕ್ಷ ಕೋಟಿ ರೂಪಾಯಿಗಳ ಯೋಜನೆಯನ್ನು ಹಮ್ಮಿಕೊಂಡು ವಿದ್ಯುತ್ ಪ್ರಸರಣವನ್ನು ಸಮರ್ಪಕವಾಗಿ ಮಾಡಲು ಮುಂದಾಗಿದೆ ಎಂದರು. ಕೋವಿಡ್ ನಂತರ ದೇಶದ ಕೈಗಾರಿಕಾ ವಲಯದಲ್ಲಿ ಭಾರೀ ಚೇತರಿಕೆ ಕಂಡು ಬಂದಿದೆ. ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ಹೆಚ್ಚಿಸಿದೆ.

    ಮಹಿಳೆಯರು ಉದ್ಯಮ ಸ್ಥಾಪನೆ ಮಾಡಲು ಬೇಕಾದ ಸಹಕಾರ. ಪ್ರೋತ್ಸಾಹ ನೀಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ಹೆಚ್ಚಿನ ವೇಗದಲ್ಲಿ ನಡೆಯುತ್ತಿದೆ. ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟಿಕೊಂಡು ಕೇಂದ್ರ ಸರ್ಕಾರ ಮೂಲಸೌಕರ್ಯಗಳಾದ ಸಾರಿಗೆ, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap