ಬೆಂಗಳೂರು:
ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಮಧ್ಯಾನದ ಬಿಸಿ ಊಟದಲ್ಲಿ ಈಗ ನೀಡುತ್ತಿರುವ ಆಹಾರದ ಬದಲಿಗೆ ಸಾತ್ವಿಕ ಆಹಾರ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾತು ಕೇಳಿ ಬಂದ ಬೆನ್ನಲೆ ಸಚಿವರು ಶಾಲೆಗಳಲ್ಲಿ ಸಾತ್ವಿಕ ಆಹಾರ ವಿತರಣೆಯ ಅಂದರೆ ಬಿಸಿಯೂಟದ ಆಹಾರ ಪದ್ದತಿ ಬದಲಾವಣೆ ಬಗ್ಗೆ ಯಾವುದೇ ಚಿಂತನೆಗಳು ನಡೆದಿಲ್ಲ. ಮುಂದಿನ ವರ್ಷದಿಂದ ಹೆಚ್ಚು ದಿನ ಮೊಟ್ಟೆ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದಿದ್ದಾರೆ.
ಶಾಸಕ ಕೆ.ಎ.ತಿಪ್ಪೇಸ್ವಾಮಿ ಅವರು ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲೆಗಳಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಪರಿಶೀಲಿಸಿ ಸಕಾರಾತ್ಮಕ ಫಲಿತಾಂಶಗಳು ಕಂಡುಕೊಳ್ಳುವ ಉದ್ದೇಶದಿಂದ ಮುಂದಿನ ವರ್ಷದಲ್ಲಿ ಹೆಚ್ಚಿನ ದಿನ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
2007ರಿಂದಲೇ 1-8ನೇ ತರಗತಿ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬ ಚರ್ಚೆ ನಡೆಯುತ್ತಿದೆ. ಆದರೆ, ನಮ್ಮ ಸರ್ಕಾರ ಯಾವುದೇ ವಿರೋಧ ಬಂದರೂ ಲೆಕ್ಕಿಸದೇ ಅಪೌಷ್ಠಿಕತೆ ಕಂಡುಬಂದ ಜಿಲ್ಲೆಗಳಲ್ಲಿ ಮೊಟ್ಟೆ ನೀಡಿತ್ತಾ ಬಂದಿದೆ. ರಾಜ್ಯದಲ್ಲಿ 1-15ನೇ ವಯಸ್ಸಿನ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ, ಬಹು ಪೋಷಕಾಂಶಗಳ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ 2021-22ನೇ ಸಾಲಿನಿಂದ ಮೊಟ್ಟೆ ಅಥವಾ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು-ಚಿಕ್ಕಿ ನೀಡಲಾಗುತ್ತಿದೆ ಎಂದರು.
ಪ್ರಾರಂಭದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಆರಂಭಿಸಲಾಯಿತು. ಕಳೆದ ವರ್ಷದಿಂದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಮಕ್ಕಳಿಗೆ ಬಲವಂತವಾಗಿ ಮೊಟ್ಟೆ ನೀಡಿಲ್ಲ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ