“ಇನ್ನೂ ನಿಮ್ಗೆ ಅವಕಾಶವಿದೆ, ನಮ್ಮ ಭವಿಷ್ಯ ಹಾಳಾಗದಂತೆ ಕಾಪಾಡಿ” : ಸಿಎಂ ಬಳಿ ಹೈಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ವಿದ್ಯಾರ್ಥಿನಿ ಮನವಿ

ಬೆಂಗಳೂರು :

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಆಲಿಯಾ ಅಸ್ಸಾದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

IPL 2022 : ಯಾರೇ ಗೆದ್ರು, ಯಾರೇ ಸೋತ್ರು ಲೆಕ್ಕಕ್ಕಿಲ್ಲ: ರಾಜಸ್ಥಾನ್ ರಾಯಲ್ಸ್ ತಂಡವೇ ಟಾಪ್

ಟ್ವೀಟ್‌ ಮೂಲಕ ಹಿಜಾಬ್‌ಗೆ ಮನವಿ ಮಾಡಿದ ಆಲಿಯಾ, ‘ದ್ವಿತೀಯ ಪಿಯು ಪರೀಕ್ಷೆಗಳು ಈ ತಿಂಗಳ 22ರಿಂದ ಆರಂಭವಾಗಲಿವೆ. ಗೌರವಾನ್ವಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವ್ರೆ ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆಗಳನ್ನು ಬರೆಯಲು ನಮಗೆ ಅವಕಾಶ ನೀಡುವ ನಿರ್ಧಾರವನ್ನ ನೀವು ತೆಗೆದುಕೊಳ್ಳಬಹುದು. ದಯವಿಟ್ಟು ಇದನ್ನ ಪರಿಗಣಿಸಿ. ನಾವು ಈ ದೇಶದ ಭವಿಷ್ಯ’ ಎಂದಿದ್ದಾರೆ.

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ : ಸೂಕ್ತ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಅಂದ್ಹಾಗೆ, ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ, ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನ ಪರಿಣಾಮಕಾರಿಯಾಗಿ ನಿಷೇಧಿಸುವ ಸರ್ಕಾರದ ಆದೇಶವನ್ನ ಎತ್ತಿಹಿಡಿದಿದೆ, ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ ಎಂದು ಹೇಳಿದೆ. ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಈ ವಿಷಯಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ