ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಜನಬೆಂಬಲ: ಸಿ.ಟಿ.ರವಿ

ಬೆಂಗಳೂರು

    ವಿಜಯ ಸಂಕಲ್ಪ ಯಾತ್ರೆಯು ಈಗಾಗಲೇ 75ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಂಚರಿಸಿದ್ದು, ಯಾತ್ರೆ ಉದ್ದಗಲಕ್ಕೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

   ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಗೆ ಸಂಬAಧಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮಾಹಿತಿ ಕೊಡಲಾಗುತ್ತಿದೆ. ಜನಬೆಂಬಲದ ಜೊತೆಗೆ ನಮ್ಮ ಕಾರ್ಯಗಳು ಪಕ್ಷ ಮತ್ತೊಮ್ಮೆ ಗೆಲ್ಲುವ ವಿಶ್ವಾಸವನ್ನು ನೀಡಿದೆ ಎಂದು ತಿಳಿಸಿದರು.

    13 ತಿಂಗಳ ಕಾಲ ಜೆಡಿಎಸ್- ಕಾಂಗ್ರೆಸ್‌ನ ಅಸ್ಥಿರ, ವೈಯಕ್ತಿಕ ಹಿತಾಸಕ್ತಿಯ ಸರಕಾರ ಇತ್ತು. ಬಳಿಕ ಯಡಿಯೂರಪ್ಪ- ಬೊಮ್ಮಾಯಿ ಸರಕಾರವು ಅಭಿವೃದ್ಧಿ ಕಾರ್ಯಗಳ ಜೊತೆ ಸ್ಥಿರ ಸರಕಾರವನ್ನು ಕೊಟ್ಟಿದೆ ಎಂದು ತಿಳಿಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಕೊಟ್ಟರು. ಬಿಜೆಪಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

    ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕ ನರಸಿಂಹ ನಾಯಕ್ (ರಾಜುಗೌಡ), ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ರಾವ್ ಮುಳೆ, ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಯಾದಗಿರಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲ್ ರೆಡ್ಡಿ, ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರ ನಾಥ್ ನಾದ ಹಾಗೂ ಯಾದಗಿರಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap