ಬೆಂಗಳೂರು :
ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಣಕಣ ರಂಗೇರುತ್ತದ್ದು ಇದೀಗ ರಾಜಕೀಯ ನಾಯಕರುಗಳು ಆರೋಪ ಮತ್ತು ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನನ್ನನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
