ಬೆಂಗಳೂರು :
ಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಇಬ್ಬರು ಯುವಕರ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ 2023 ನೇ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಿಮೆಂಟ್ ಗಳನ್ನು ದೊಡ್ಡಬೆಳವಂಗಲ ಹೋಬಳಿ ಕೇಂದ್ರದಲ್ಲಿ ನಡೆಸದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಕ್ರಿಕೆಟ್ ಟೂರ್ನಿಮೆಂಟ್ ವೇಳೆ ನಡೆದ ಇಬ್ಬರ ಕೊಲೆ ಹಿನ್ನೆಲೆಯಲ್ಲಿ, ತಮ್ಮ ಠಾಣಾ ಸರಹದ್ದಿನಲ್ಲಿ ಮುಂಬರುವ 2023 ನೇ ವಿಧಾನ ಸಭಾ ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತವಾಗಿ ನಡೆಯುವ ಎಲ್ಲಾ ಕ್ರಿಕೆಟ್ ಟೂರ್ನಿಮೆಂಟ್‌ಗಳನ್ನು ನಡೆಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಿದಲ್ಲಿ ಅಂತಹವರ ಮೇಲೆ ಕಾನುನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ