ಮಹಿಳಾ ದೌರ್ಜನ್ಯ ತಡೆಗೆ ಕ್ರಮ: ಹಾಲಪ್ಪ ಆಚಾರ್

ಬೆಂಗಳೂರು‌

   ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸಲು ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, ಆಸಿಡ್ ದಾಳಿಗೊಳಗಾದವರಿಗೆ ನೀಡುತ್ತಿದ್ದ 3 ಲಕ್ಷ ರೂ ಪರಿಹಾರವನ್ನು 10 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಗಣಿ, ಭೂ ವಿಜ್ಞಾನ, ವಿಶೇಷ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ವಿಧಾನಪರಿಷತ್ತಿಗಿಂದು ತಿಳಿಸಿದರು.

     ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಸಲೀಂ ಅಹಮದ್ ಅವರ ಪರವಾಗಿ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸಿಡ್ ದಾಳಿ ಪ್ರಕರಣಗಳಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇತ್ತೀಚೆಗೆ ಕನಕಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಆಸಿಡ್ ದಾಳಿ ಸಂದರ್ಭದಲ್ಲಿ ಸರ್ಕಾರ ತಕ್ಷಣವೇ ಸ್ಪಂದಿಸಿದೆ. ತಾವೂ ಕೂಡ ಆಸ್ಪತ್ರೆಗೆ ತೆರಳಿ ಸಂತ್ರಸ್ತೆಗೆ ಧೈರ್ಯ ತುಂಬಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾಗಿ ತಿಳಿಸಿದರು.

     ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಕಾನೂನು ಕ್ರಮ ತೆಗೆಕೊಳ್ಳಲಾಗುತ್ತಿದೆ. ಜೊತೆಗೆ ಸಂತ್ರಸ್ತರಿಗೆ ಸೂಕ್ತ ಪುನರ್ ವಸತಿ, ವೃತ್ತಿ ತರಬೇತಿ ನೀಡಿ ಸ್ವಾವಲಂಬಿ ಬದಕು ಕಟ್ಟಿಕೊಳ್ಳಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. 2021-22 ರ ಸಾಲಿನಲ್ಲಿ 25 ಸಾವಿರ ನೋಂದವರಿಗೆ ಎಲ್ಲಾ ರೀತಿಯ ನೆರವು ಕಲ್ಪಿಸಲಾಗಿದೆ ಎಂದು ಹೇಳಿದರು. ಮಹಿಳಾ ದೌರ್ಜನ್ಯ ತಡೆಯಲು ನಿರ್ಭಯ ಯೋಜನೆಯಡಿ ಕೂಡ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆತ್ಮ ರಕ್ಷಣೆ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಮಹಿಳಾ ದೌರ್ಜನ್ಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ಗೃಹ ಇಲಾಖೆಯಿಂದ ಮಾಹಿತಿ ತರಿಸಿ ಸದನದ ಮುಂದಿಡುವುದಾಗಿ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap