ಬೆಂಗಳೂರು
ರಾಜ್ಯ ವಿಧಾನಸಭಾ ಚುನಾವಣಾ ದಿನಾಂತ ಘೋಷಣೆಯಾಗಿದ್ದು, ಚುನಾವಣೆಗೆ ದಿನಗಣನೆ ಶುರುವಾಗಿದೆ. ಇತ್ತ ರಾಜಕೀಯ ಪಕ್ಷಗಳು ಹಲವು ತಂತ್ರಗಾರಿಕೆಯೊಂದಿಗೆ ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ.
ಇನ್ನೂ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆದರೆ ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ. ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ. ಆದ್ದರಿಂದ ನಮ್ಮ ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
75 ವರ್ಷ ವಯಸ್ಸಾದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ಮತ್ತು ಒಂದೇ ಕುಟುಂಬದವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂಬ ನಿರ್ಣಯವನ್ನು ಮಾಡಿ ಮೋದಿ ಹಾಗೂ ಅಮಿತ್ ಶಾ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








