ಮುಂದಿನ 1ವಾರ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ….!

ಬೆಂಗಳೂರು : 

    ಕಳೆದ ಒಂದು ತಿಂಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆರಾಯ ಕೊಂಚ ಬಿಡುವು ಪಡೆದಿದ್ದ, ಇದೀಗ ಬುಧವಾರದಿಂದ ಮತ್ತೆ ಮಳೆ ಶುರುವಾಗಿದೆ. ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

    ಅಂಕೋಲಾ, ಕಾರವಾರ, ಕ್ಯಾಸಲ್​ರಾಕ್​, ಹೊಸದುರ್ಗದಲ್ಲಿ ಭಾರಿ ಮಳೆಯಾಗಲಿದೆ. ಹೊನ್ನಾವರ, ಮಂಕಿ, ಗಂಗಾವತಿ, ಕೂಡಲಸಂಗಮ, ಕದ್ರಾ, ಹುಣಸಗಿ, ದೇವದುರ್ಗ, ನಾರಾಯಣಪುರ, ಕಡೂರು, ಪಣಂಬೂರು, ಲಿಂಗಸುಗೂರು, ಮಾನ್ವಿ, ಭಾಗಮಂಡಲ, ಯುಗಟಿ, ಕುಕನೂರು, ಕುರ್ಡಿ, ಶಿರಾಲಿಯಲ್ಲಿ ಮಳೆಯಾಗಲಿದೆ.ಲಿಂಗನಮಕ್ಕಿ, ಕಲಘಟಗಿ, ಧರ್ಮಸ್ಥಳ, ಮುದಗಲ್, ಗಂಗಾವತಿ, ಕಿರವತ್ತಿ, ಖಜೂರಿ, ಇಳಕಲ್, ಲೋಕಾಪುರ, ಶೋರಾಪುರ, ಯಡವಾಡ, ಕೋಲಾರ, ಆಗುಂಬೆ, ಚನ್ನಪಟ್ಟಣ, ಸಿದ್ದಾಪುರ, ಬೆಳ್ಳೂರು, ಬನವಾಸಿ, ಬಾದಾಮಿ, ಲೋಂಡಾ, ಕುಷ್ಟಗಿ, ತರೀಕೆರೆ, ತ್ಯಾಗರ್ತಿ, ತರೀಕೆರೆ, ಬರಗೂರು, ಮಾಗಡಿ, ಕಳಸ, ಸಿರಾದಲ್ಲಿ ಮಳೆಯಾಗಿದೆ.
    ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಹೊನ್ನಾವರದಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 25.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಬೀದರ್​ನಲ್ಲಿ27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಧಾರವಾಡದಲ್ಲಿ 27.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link
Powered by Social Snap