ಐಪಿಎಲ್ ಇತಿಹಾಸದಲ್ಲಿ ಮೊದಲ 3 ಪಂದ್ಯ ಸೋತರೂ 2 ಬಾರಿ ಪ್ಲೇಆಫ್ ಪ್ರವೇಶಿಸಿದ್ದ ಏಕೈಕ ತಂಡವಿದು!

ಸದ್ಯ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ಈ ಬಾರಿಯ ಟೂರ್ನಿಯ ಆರಂಭದ ಪಂದ್ಯಗಳಲ್ಲಿಯೇ ನಿರೀಕ್ಷೆಗೂ ಮೀರಿದ ಫಲಿತಾಂಶಗಳು ಹೊರಬಿದ್ದಿವೆ. ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ಯಶಸ್ಸು ಸಾಧಿಸಿ ಬಲಿಷ್ಟ ತಂಡಗಳು ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭದ ಪಂದ್ಯಗಳಲ್ಲಿ ದೊಡ್ಡ ಹಿನ್ನಡೆಯನ್ನು ಅನುಭವಿಸಿದ್ದು, ತಮ್ಮ ಮೊದಲ 3 ಪಂದ್ಯಗಳಲ್ಲಿ ಸಾಲು ಸಾಲಾಗಿ ಸೋತು ಹ್ಯಾಟ್ರಿಕ್ ಸೋಲನ್ನು ಕಂಡಿವೆ.

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು, ಸ್ಥಳೀಯ ಭಾಷೆಗಳಲ್ಲ; ಭಾಷೆ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತು, ದ್ವಿತೀಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಸೋಲುಂಡಿತು ಹಾಗೂ ತೃತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೊದಲ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗೆ ಹ್ಯಾಟ್ರಿಕ್ ಸೋಲು ಕಂಡಿರುವ ಚೆನ್ನೈ ಸೂಪರ ಕಿಂಗ್ಸ್ ಸದ್ಯ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

40ನೇ ವಸಂತಕ್ಕೆ ಕಾಲಿಟ್ಟ ಅಲ್ಲು ಅರ್ಜುನ್‌: ರಶ್ಮಿಕಾ ಸೇರಿ ಗಣ್ಯರಿಂದ ಶುಭ ಹಾರೈಕೆ

ಇನ್ನು ಐಪಿಎಲ್ ಇತಿಹಾಸದಲ್ಲಿ ಒಟ್ಟು 5 ಬಾರಿ ಟ್ರೋಫಿ ಗೆದ್ದು, ಅತಿಹೆಚ್ಚು ಐಪಿಎಲ್ ಟ್ರೋಫಿ ಗೆದ್ದಿರುವ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮುಂಬೈ ಇಂಡಿಯನ್ಸ್ ಕೂಡ ಈ ಬಾರಿಯ ಟೂರ್ನಿಯಲ್ಲಿನ ತನ್ನ ಮೊದಲ 3 ಪಂದ್ಯಗಳಲ್ಲಿ ಸೋಲುಂಡಿದೆ. ಮೊದಲಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುಂಡ ಮುಂಬೈ ಇಂಡಿಯನ್ಸ್ ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲುಂಡಿತು ಹಾಗೂ ಇತ್ತೀಚೆಗೆ ನಡೆದ ತೃತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನ್ನು ಅನುಭವಿಸಿದೆ.

‘ಆಯಂಕರ್​ಗಳಿಗೆ ಬೈಯ್ಯುತ್ತಿದ್ದೆ, ಆದ್ರೆ ಈಗ ನಾನೇ ಆಯಂಕರ್​’: ಹೊಸ ಜರ್ನಿ ಆರಂಭಿಸಿದ ಬಿಗ್​ ಬಾಸ್​ ಮಂಜು

ಹೀಗೆ ಐಪಿಎಲ್‌ನಲ್ಲಿ ಅತಿಹೆಚ್ಚು ಯಶಸ್ಸು ಸಾಧಿಸಿರುವ ತಂಡಗಳೆನಿಸಿಕೊಂಡಿರುವ ಈ ಎರಡು ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಪ್ಲೇಆಫ್ ತಲುಪುವಲ್ಲಿ ಯಶಸ್ವಿಯಾಗುತ್ತಾ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಇದೇ ವೇಳೆ ಐಪಿಎಲ್ ಇತಿಹಾಸದಲ್ಲಿ ಮೊದಲ 3 ಪಂದ್ಯಗಳಲ್ಲಿ ಸೋತರೂ ಸಹ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿರುವ ತಂಡಗಳು ಯಾವುದು ಎಂಬ ಚರ್ಚೆ ನಡೆಯುತ್ತಿದ್ದು, 2 ಬಾರಿ ತನ್ನ ಮೊದಲ 3 ಪಂದ್ಯಗಳನ್ನು ಸೋತು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟ ತಂಡ ಯಾವುದು ಎಂಬ ಮಾಹಿತಿ ಈ ಕೆಳಕಂಡಂತಿದೆ..

           ಮೊದಲಿಗೆ ಹ್ಯಾಟ್ರಿಕ್ ಸೋಲು ಕಂಡು ಪ್ಲೇಆಫ್ ಪ್ರವೇಶಿಸಿದ ಕೊನೆಯ ತಂಡವಿದು

 2014ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ 5 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದ ಮುಂಬೈ ಇಂಡಿಯನ್ಸ್ ಆ ಆವೃತ್ತಿಯಲ್ಲಿ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಅಷ್ಟೇ ಅಲ್ಲದೇ 2015ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ತನ್ನ ಮೊದಲ 4 ಪಂದ್ಯಗಳಲ್ಲಿ ಸತತ ಸೋಲನ್ನು ಕಂಡಿದ್ದ ಮುಂಬೈ ಇಂಡಿಯನ್ಸ್ ಆ ಆವೃತ್ತಿಯಲ್ಲಿಯೂ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಿತ್ತು ಹಾಗೂ ಆ ಆವೃತ್ತಿಯಲ್ಲಿ ಚಾಂಪಿಯನ್ ಆಗಿ ಕೂಡ ಹೊರಹೊಮ್ಮಿತ್ತು. ಹೀಗೆ 2015ರ ಐಪಿಎಲ್‌ನಲ್ಲಿ ಮೊದಲ 3 ಪಂದ್ಯಗಳಲ್ಲಿ ಸೋತ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಿದ್ದು ಬಿಟ್ಟರೆ ನಂತರದ ಆವೃತ್ತಿಯಲ್ಲಿ ಮೊದಲ 3 ಪಂದ್ಯಗಳಲ್ಲಿ ಸೋತ ಬೇರೆ ಯಾವುದೇ ತಂಡ ಕೂಡ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿಲ್ಲ.          2018ರಲ್ಲೂ ಮೊದಲ ಮೂರು ಪಂದ್ಯ ಸೋತಿದ್ದ ಮುಂಬೈ; ಪ್ಲೇಆಫ್ ಕತೆ?

2014 ಮತ್ತು 2015ರ ಐಪಿಎಲ್‌ನಲ್ಲಿ ಮೊದಲಿಗೆ ಸಾಲು ಸಾಲು ಸೋಲು ಕಂಡರೂ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದ ಮುಂಬೈ ಇಂಡಿಯನ್ಸ್ ತಂಡ 2018ರ ಐಪಿಎಲ್ ಟೂರ್ನಿಯಲ್ಲಿಯೂ ಸಹ ಮೊದಲ 3 ಪಂದ್ಯಗಳಲ್ಲಿ ಸೋತಿತ್ತು. ಆದರೆ ಈ ಬಾರಿ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು.

             ಆರ್‌ಸಿಬಿ ಕೂಡ ವಿಫಲ

ಇನ್ನು 2019ರ ಐಪಿಎಲ್ ಟೂರ್ನಿಯಲ್ಲಿ ತನ್ನ ಮೊದಲ 3 ಪಂದ್ಯಗಳಲ್ಲಿ ಸಾಲು ಸಾಲು ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಪ್ರವೇಶಿಸುವಲ್ಲಿ ವಿಫಲವಾಗಿದ್ದವು. ಹಾಗೂ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ ಮೂರು ಪಂದ್ಯಗಳಲ್ಲಿ ಸೋತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ತೃಪ್ತಿಗೊಂಡಿತ್ತು.

ಕುಣಿಗಲ್: 161 ಅಡಿ ಆಂಜನೇಯ ವಿಗ್ರಹ ಏ 10 ರಂದು ಪ್ರಧಾನಿಯಿಂದ ಲೋಕಾರ್ಪಣೆ

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap