ಬೆಂಗಳೂರು
ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಖಾತರಿ ನಮಗಿದೆ . ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ ಎಂಬ ಖಾತರಿಯೂ ಇದೆ. ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿ ನಾನು ಮಾತನಾಡಲ್ಲ. ಅವರು ಏನೇ ಮಾಡಿದರು 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ. ಅವರು 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಸಭೆ ಕುರಿತು ಮಾತನಾಡಿದ ಅವರು, ಬಹುತೇಕ ಶೇ.75 ರಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, ಇಂದು ಉಳಿದ ಕ್ಷೇತ್ರಗಳ ಪಟ್ಟಿ ಅಂತಿಮಗೊಳಿಸಲಾಗುವುದು. ನಂತರ ರಾಷ್ಟ್ರೀಯ ಮಟ್ಟದ ಸಭೆ ನಡೆಯಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಖಾತರಿ ಇದೆ, ನಾವು 140 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ.
![](https://prajapragathi.com/wp-content/uploads/2023/03/Untitled-4-9.jpg)