ಕಾಂಗ್ರೆಸ್‌ 3ನೇ ಪಟ್ಟಿ ರಿಲೀಸ್‌….!

ಬೆಂಗಳೂರು:

      ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 3ನೇ ಪಟ್ಟಿ ರಲೀಸ್‌ ಆಗಿದ್ದು ಇದರಲ್ಲಿ ತೆರದಾಳ ಕ್ಷೇತ್ರದಲ್ಲಿ ಶಾಸಕಿಯಾಗಿದ್ದ ನಟಿ ಮತ್ತು ರಾಜಕಾರಣಿ ಉಮಾಶ್ರೀ ಗೆ ಟಿಕೆಟ್‌ ಮಿಸ್‌ ಆಗಿದೆ , ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಪ್ಲಾನ್ ಕೈಬಿಟ್ಟಿದ್ದಾರೆ  .

ತಮ್ಮ ಆಪ್ತರಾಜ ಕೆ.ಜೆ.ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಹಿತೈಷಿಗಳ ಜೊತೆ ಚರ್ಚಿಸಿರುವ ಸಿದ್ದರಾಮಯ್ಯ  ವರುಣಾ ಕ್ಷೇತ್ರ ಸುರಕ್ಷಿತ ಕ್ಷೇತ್ರವಾಗಿದೆ ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಅವರು ಸಲಹೆ ನೀಡಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ಮೂಲಗಳು ತಿಳಿಸಿವೆ. ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವುದು ವ್ಯತಿರಿರಕ್ತವಾಗಿದ್ದು ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ವರುಣಾದಿಂದ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಗೌಪ್ಯ ಸಭೆ ನಡೆಸಿ ವರುಣಾ ದಲ್ಲೆ ಹೆಚ್ಚಿನ ಪ್ರಚಾರ ನಡೆಸಿ ಕೋಲಾರದಿಂದ ಸ್ಪರ್ಧಿಸುವ ಯೋಚನೆ ಕೈಬಿಡಬೇಕು ಎಂದು ತೀರ್ಮಾನಿಸಿದ್ದಾರೆ.

      ಕೆ.ಜೆ.ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಅವರ ಹಿತೈಷಿಗಳು ವರುಣಾ ಸುರಕ್ಷಿತ ಕ್ಷೇತ್ರವಾಗಿದ್ದು, ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ಟಿಎನ್‌ಐಇಗೆ ತಿಳಿಸಿವೆ. ಎರಡು ಸ್ಥಾನಗಳಿಂದ ಸ್ಪರ್ಧಿಸುವುದರಿಂದ ಎರಡು ಕ್ಷೇತ್ರಗಳ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗಬಹುದು ಎಂಬ ಕಾರಣವನ್ನು ಮುಂದಿಡಲಾಗಿದೆ. ಅದೂ ಅಲ್ಲದೆ, ಸಿದ್ದರಾಮಯ್ಯನವರಿಗೆ ರಾಜ್ಯದೆಲ್ಲೆಡೆ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರಚಾರ ನಡೆಸುವುದು ಕಷ್ಟವಾಗಲಿದೆ.

     ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ , ಪಕ್ಷದ ಮೂರನೇ ಪಟ್ಟಿಯು ಯಾವುದೇ ಸಮಯದಲ್ಲಿ ರಿಲೀಸ್ ಆಗಲಿದ್ದು ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಲಿದೆ ಎಂದಿದ್ದಾರೆ.

ಷಣ್ಮುಕಪ್ಪಾಗೆ ತುಮಕೂರು ಗ್ರಾಮಾಂತರ ಟಿಕೆಟ್‌ 

   ತೀವ್ರ ಕುತೂಹಲ ಕೆರಳಿಸಿದ್ದ ತು.ಗ್ರಾಮಾಂತರದ ಟಿಕೆಟ್‌ ಅನ್ನು ಗಿಟ್ಟಿಸುವಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಷಣ್ಮುಕಪ್ಪಾ ಯಶಸ್ವಿಯಾಗಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link