ತಿರುಪತಿ:
ಚಲಿಸುತ್ತಿದ್ದ ರೈಲಿನ ಮುಂದೆ ಬಿದ್ದು ಆಂಧ್ರಪ್ರದೇಶದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುಪತಿಯಲ್ಲಿ ನಡೆದಿದೆ.
ತಿರುಪತಿ ನಿವಾಸಿಗಳಾಗಿದ್ದ ನಿವೃತ್ತ ನ್ಯಾಯಾಧೀಶರಾದ ಪಿ. ಸುಧಾಕರ್ (65) ಅವರ ಮೃತದೇಹ ತಿರುಪತಿ-ರೆನಿಗುಂಟಾ ಮಾರ್ಗದ ರೈಲ್ವೆ ಹಳಿ ಮೇಲೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.
ಪತಿ ಸಾವಿಗೆ ಶರಣಾದ ಕೆಲವೇ ಕ್ಷಣಗಳಲ್ಲಿ ಪತ್ನಿ ವರಲಕ್ಷ್ಮೀ ಕೂಡ ಅದೇ ಮಾರ್ಗದಲ್ಲಿ ಬೇರೊಂದು ರೈಲಿಗೆ ಪ್ರಾಣ ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅನ್ಯಾರೋಗ್ಯದ ಹಿನ್ನೆಲೆಯಲ್ಲಿ ಪಿ.ಸುಧಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
