ರಾಹುಲ್‌ ಗಾಂಧಿ ಅನರ್ಹತೆ : ಪ್ರಜಾಪ್ರಭುತ್ವದ ಕುಸಿತ : ಮಮತಾ ಬ್ಯಾನರ್ಜಿ

ಕೋಲ್ಕತ್ತ:

       ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿ ಸಿರುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ. ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ದೇಶವು ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

   ಮೋದಿ ಉಪನಾಮ ಕುರಿತಂತೆ 2019ರಲ್ಲಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಹುಲ್‌ ಗಾಂಧಿ ತಪ್ಪಿತಸ್ಥರು ಎಂದು ಸೂರತ್‌ ನ್ಯಾಯಾಲಯ ಗುರುವಾರವಷ್ಟೇ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಶುಕ್ರವಾರ) ಲೋಕಸಭೆ ಕಾರ್ಯದರ್ಶಿ ಅವರು, ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಭಾರತದಲ್ಲಿ ವಿರೋಧ ಪಕ್ಷಗಳ ನಾಯಕರು ಬಿಜೆಪಿಯ ಮುಖ್ಯ ಗುರಿಯಾಗಿದ್ದಾರೆ! ಕ್ರಿಮಿನಲ್‌ ಹಿನ್ನಲೆಯ ಬಿಜೆಪಿ ನಾಯಕರು ಕ್ಯಾಬಿನೆಟ್‌ಗೆ ಸೇರುತ್ತಿರುವ ಸಂದರ್ಭದಲ್ಲಿ, ವಿರೋಧ ಪಕ್ಷಗಳ ನಾಯಕರನ್ನು ಅವರ ಹೇಳಿಕೆಗಳಿಗಾಗಿ ಅನರ್ಹಗೊಳಿಸಲಾಗುತ್ತದೆ’ ಎಂದಿದ್ದಾರೆ.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್‌ ಅವರು ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ತಪ್ಪಿತಸ್ಥರು ಎಂದಿದೆ. ಈ ಸಂಬಂಧ 2 ವರ್ಷ ಜೈಲು ಹಾಗೂ ದಂಡ ಪಾವತಿಯ ಶಿಕ್ಷೆ ವಿಧಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap