ಕೊಪ್ಪಳ :
ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಸವಾರ ಬೆಣಕಲ್ ಗ್ರಾಮದ ಸಂತೋಷ್ ವಂಕಿ (25), ಮಿನಿ ಬಸ್ ನಲ್ಲಿದ್ದ ಭೀಮವ್ವ (70), ರಂಗಪ್ಪ (80) ಹಾಗೂ ಶಿವಾನಂದಪ್ಪ (60) ಸಾವನ್ನಪ್ಪಿರುವ ದುರ್ದೈವಿಗಳು.
34 ಜನರಿದ್ದ ಮಿನಿ ಬಸ್ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿಗೆ ಬರುತ್ತಿತ್ತು. ಈ ವೇಳೆ ಬೈಕ್ ವೇಗವಾಗಿ ಬಂದಿದ್ದರಿಂದ ಮಿನಿ ಬಸ್‍ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಮಿನಿ ಬಸ್ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೊರಟಿತ್ತು ಎನ್ನಲಾಗಿದೆ. ಬೈಕ್ ಸವಾರನ ಅಜಾಗರೂಕತೆಯ ಚಾಲನೆಯೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ಸುಮಾರು 8ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ