ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಬೆಂಗಳೂರು :

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ.

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಏ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ದರ ಹೆಚ್ಚಳ

ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಮುಂದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಇಂದು ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap