ಬಳ್ಳಾರಿ
ಬಳ್ಳಾರಿ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಎನ್‌ಓಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ.
ಪ್ರಶಾಂತ್ ರೆಡ್ಡಿ, ಯೋಗೀಶ್, ಮೊಹಮದ್ ಗೌಸ್ ಬಂಧಿತ ಅಧಿಕಾರಿಗಳಾಗಿದ್ದಾರೆ. ಮನೆ ಕಟ್ಟಲು ಪುರಾತತ್ವ ಇಲಾಖೆಯಿಂದ ಎನ್‌ಓಸಿ ನೀಡಲು ಹಣ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಖಾಸಗಿ ಹೋಟೆಲ್ನಲ್ಲಿ ಲಂಚದ ಹಣವನ್ನು ಮುಂಗಡವಾಗಿ ಪಡೆಯುವಾಗ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮೂವರು ಅಧಿಕಾರಿಗಳನ್ನು ಬಲೆಗೆ ಕೆಡವಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ