ಮೈಸೂರು :
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆಯೇ ಇದೀಗ ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಆಗಿದ್ದ ಶ್ರೀಧರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ.
ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ ಎಂಬಾತನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ಇನ್ನು ಫಾರ್ಮ್‌ಹೌಸ್ ಪಕ್ಕದಲ್ಲೇ ಶವ ಸಿಕ್ಕಿರುವುದು ಇನ್ನು ಅನುಮಾನ ಜಾಸ್ತಿ ಆಗುವಂತೆ ಮಾಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ (35) ವಿಷ ಸೇವಿಸಿ ಏಪ್ರಿಲ್ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಈ ಘಟನೆ ಏಪ್ರಿಲ್‌ನಲ್ಲಿ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಶ್ರೀಧರ್ ಎಂಬುವವರು ನಟ ದರ್ಶನ್ ಅವರಿಗೆ ಒಂದು ವರ್ಷ ಮ್ಯಾನೇಜರ್ ಆಗಿದ್ದರು ಎಂದು ತಿಳಿದುಬಂದಿದೆ.
ಕೀಟನಾಶಕ ಸೇವನೆ ಮಾಡಿ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ ಪೊಲೀಸರು ಈ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇಂದು (ಜೂನ್ 18) ಸ್ಥಳ ಮಹಜರಿಗಾಗಿ ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಬಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
