ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ

 ಕರ್ನಾಟಕ :

 ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಮುಂದಿನ ತಿಂಗಳಿನಿಂದ ಮಾನ್ಸೂನ್  ಶುರುವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು, ಮಲೆನಾಡು ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.
ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್: ಇಂದು ‘ಪುನೀತ್ ರಾಜ್ ಕುಮಾರ್’ಗೆ ಮರಣೋತ್ತವ ‘ಬಸವಶ್ರೀ ಪ್ರಶಸ್ತಿ’ ಪ್ರದಾನ

ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಭಾನುವಾರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಮೇ 5ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ.

ಬ್ರೇಕಿಂಗ್ : ಪಕ್ಷದ ಪ್ರಮುಖರ ಜೊತೆ ಇಂದು ನಡೆಯಬೇಕಿದ್ದ ಅಮಿತ್ ಷಾ ಮೀಟಿಂಗ್ ದಿಢೀರ್ ರದ್ದು

ಹಾಗೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಉತ್ತರಾಖಂಡ ಮತ್ತು ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್, ಬಿಹಾರ, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ.

ಒಡಿಶಾ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್, ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

PSI ಎಕ್ಸಾಂ ಅಕ್ರಮ: ನನಗೆ ಸಚಿವರ ಸಂಬಂಧಿ ಮತ್ತು ಡಿಕೆಶಿ ಪರಿಚಯವಿದೆ. ಎನ್ನುತ್ತಲೇ ಬೇಸರ ವ್ಯಕ್ತಪಡಿಸಿದ ದರ್ಶನ್​ ಗೌಡನ ತಂದೆ

ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 40 ಸೆಲ್ಸಿಯಸ್​ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link