ಬೆಂಗಳೂರು :
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದಿನಿಂದ ಏಪ್ರಿಲ್ 9 ರವರೆಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಗನ್ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣೆಗೆರೆ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಇಂದಿನಿಂದ ಏಪ್ರಿಲ್ 9 ರವರೆಗೆ ಕರಾವಳಿ ಸೇರಿದಂತೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ