ತಿಪಟೂರು :
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ, ಹೆಚ್.ಭೈರಾಪುರ ಗ್ರಾಮದ ಶ್ರೀ ಕರಿಯಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಸುಮಾರು 50 ಸಾವಿರ ರೂ. ಹಣ, ಬೆಳ್ಳಿ ಮತ್ತು ಚಿನ್ನದ ಒಡವೆಗಳನ್ನು ದೋಚಿ ಹಣದ ಪೆಟ್ಟಿಗೆಯನ್ನು (ಡಬ್ಬಿಗಡಿಗೆ) ದೇವಸ್ಥಾನದ ಹಿಂಭಾಗದಲ್ಲಿರುವ ತೋಟದಲ್ಲಿ ಎಸೆದು, ದೇವಸ್ಥಾನದ ಪಕ್ಕದಲ್ಲಿದ್ದ ಶ್ರೀ ಚಿಕ್ಕಮ್ಮ ದೇವಸ್ಥಾನಕ್ಕೂ ಖನ್ನ ಹಾಕಿದ್ದಾರೆ. ಕಳೆದ 2 ವರ್ಷದ ಹಿಂದೆ ಇದೇ ದೇವಾಲಯದಲ್ಲಿ ಕಳ್ಳತನವಾಗಿದ್ದು, ಕಳ್ಳತನ ಮರುಕಳಿಸಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವಾರದಿಂದ ಪಕ್ಕದ ಹಾಲ್ಕುರಿಕೆ ಗ್ರಾಮದಲ್ಲಿ ನಾಲ್ಕು ಮನೆ, ಹೆಚ್.ಬೈರಾಪುರ ಗ್ರಾಮದ ಒಂದು ಮನೆಯಲ್ಲಿ ಕಳ್ಳತನ ನಡೆದಿದ್ದು, ಒಟ್ಟು ಐದು ಕಳ್ಳತನ ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶೀಘ್ರವಾಗಿ ಕಳ್ಳರನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
