ತಿಪಟೂರು :
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬೊಮ್ಮಲಾಪುರದ ಗ್ರಾಮದ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಜಾನುವಾರುಗಳ ಮೈತೊಳೆಯಲು ಹೋಗಿ ಹೊಂಡದ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡು ಮಾದಿಹಳ್ಳಿ ಗ್ರಾಮದ ರಮೇಶ್ ಎಂಬುವವರ ಮಕ್ಕಳಾದ ರಾಮಚಂದ್ರ (14), ಯಶವಂತ್ (12) ಮೃತಪಟ್ಟಿದ್ದಾರೆ.
ಕಳೆದ 3-4 ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ ಮಳೆಗೆ ಕೃಷಿ ಹೊಂಡ ತುಂಬಿತ್ತು. ಈ ಸಂದರ್ಭದಲ್ಲಿ ಮಕ್ಕಳು ಜಾನುವಾರುಗಳಿಗೆ ಸ್ನಾನ ಮಾಡಿಸಲು ಹೋಗಿ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ ಹೊನ್ನವಳ್ಳಿ ಪೋಲೀಸ್ ಠಾಣೆಯ ಸಬ್-ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಆಕಸ್ಮಿಕ ಸಾವೆಂದು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
