ತಿಪಟೂರು :
ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಉಚಿತ ಕಾನೂನು ನೆರವು ಪಡೆಯಲು ಇರಬಹುದಾದ ಷರತ್ತುಗಳು, ಸೇವಾ ಸಮಿತಿಯ ಧ್ಯೇಯೋದ್ದೇಶಗಳನ್ನು ಮತ್ತು ಲೋಕ ಅದಾಲತ್‍ನ ಅನುಕೂಲತೆಗಳ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಅವರು ಅರಿವು ಮೂಡಿಸಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಭಾರತದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿಯೂ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಗುರುವಾರ ತಿಪಟೂರಿನ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರಿಗೆ ಹಾಗೂ ರೈಲು ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್ ಮಾತನಾಡಿ ಶ್ರೀಸಾಮಾನ್ಯರಿಗೂ ಸಾಮಾನ್ಯ ಕಾನೂನು ತಿಳುವಳಿಕೆ ಅವಶ್ಯಕವಾಗಿದ್ದು, ಅಮೃತ ಮಹೋತ್ಸವದ ಅಂಗವಾಗಿ ಈ ಅರಿವಿನ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮಗಳಲ್ಲಿ ಹಮ್ಮಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ