ತಿಪಟೂರು :
ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಶೆಟ್ಟಿಹಳ್ಳಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಇರುವ ದೊಣೆಗೆ ಬಾಲಕನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವಿಗೀಡಾದ ಘಟನೆ ನಡೆದಿದೆ.
ಮೃತ ಬಾಲಕ ಶಶಾಂಕ್ (12) ಅರಸೀಕೆರೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದ ಮಲ್ಲೇಶ್ ಆಚಾರ್ ಮಗ ಎಂದು ತಿಳಿದುಬಂದಿದೆ. ಶೆಟ್ಟಿಹಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಕುಟುಂಬಸ್ಥರು ಪೂಜಾ ಕಾರ್ಯಕ್ರಮವನ್ನು ಮಾಡಿಸಲು ತೆರಳಿದಾಗ ಬಾಲಕ ದೇವಾಲಯದ ಪಕ್ಕದಲ್ಲಿದ್ದ ಹೊಂಡದಲ್ಲಿ ಕಾಲುಜಾರಿ ಮೃತಪಟ್ಟಿದ್ದು ಸ್ಥಳದಲ್ಲಿ ಕುಟುಂಬಸ್ಥರ ಅಳಲು ಮುಗಿಲು ಮುಟ್ಟುವಂತಿತ್ತು.
ಅಗ್ನಿಶಾಮಕ ಸಿಬ್ಬಂದಿಯ ನೆರವಿನೊಂದಿಗೆ ಬಾಲಕನ ಶವವನ್ನು ದೊಣೆಯಿಂದ ಹೊರತೆಗೆಯಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
