ತಿರುಪತಿ ‘ಹುಂಡಿ’ಯಲ್ಲಿ ಭಕ್ತರು ಹಾಕಿದ್ದ ರೂ. 100 ಕೋಟಿಗೂ ಅಧಿಕ ಹಣ ಕಳ್ಳತನ,

ತಿರುಪತಿ:

     ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ  ರೂ.100 ಕೋಟಿ ಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.

   ತಿರುಮಲ ತಿರುಪತಿ ದೇವಸ್ತಾನಮ್ಸ್  ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

  ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ಮನೆ, ತಾಡೆಪಲ್ಲಿ ಪ್ಯಾಲೇಸ್‌ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

Recent Articles

spot_img

Related Stories

Share via
Copy link