ತಿರುಪತಿ ಲಡ್ಡು : ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ:

   ಆಂಧ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆರೋಪದ ಕುರಿತು ಕೇಂದ್ರೀಯ ತನಿಖಾ ದಳ  ತನಿಖೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು  ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ.

   ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸಾಮಾಜಿಕ ಕಾರ್ಯಕರ್ತ ಮತ್ತು ‘ಗ್ಲೋಬಲ್ ಪೀಸ್ ಇನಿಶಿಯೇಟಿವ್’ ಸಂಘಟನೆಯ ಅಧ್ಯಕ್ಷ ಕೆ ಎ ಪಾಲ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ. ನೀವು ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದರೆ ನಾವು ಎಲ್ಲಾ ದೇವಾಲಯಗಳು, ಗುರುದ್ವಾರಗಳು ಇತ್ಯಾದಿಗಳಿಗೆ ಪ್ರತ್ಯೇಕ ರಾಜ್ಯಗಳನ್ನು ರಚಿಸಬೇಕಾಗುತ್ತದೆ. ನಿರ್ದಿಷ್ಟ ಧರ್ಮಕ್ಕಾಗಿ ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಾವು ನಿರ್ದೇಶಿಸಲು ಸಾಧ್ಯವಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.

   ಲಡ್ಡು ಪ್ರಸಾದ ಖರೀದಿ ಮತ್ತು ತಯಾರಿಕೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರಷ್ಟಾಚಾರ ಮತ್ತು ದುರುಪಯೋಗದ ಆರೋಪಗಳ ಕುರಿತು ಸಿಬಿಐ ಸಮಗ್ರ ತನಿಖೆ ನಡೆಸಬೇಕು ಎಂದು ಪಾಲ್ ತಮ್ಮ ಮನವಿಯಲ್ಲಿ ಕೋರಿದ್ದರು.

   ಕೋಟ್ಯಂತರ ಜನರ ಭಾವನೆಗಳನ್ನು ಈಡೇರಿಸಲು ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಅಕ್ಟೋಬರ್ 4 ರಂದು ಸುಪ್ರೀಂ ಕೋರ್ಟ್ ಐದು ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಿತ್ತು ಹಾಗೂ ನ್ಯಾಯಾಲಯವನ್ನು ‘ರಾಜಕೀಯವಾಗಿ ಬಳಸಲಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿತ್ತು.

  ಸ್ವತಂತ್ರ ಎಸ್‌ಐಟಿಯು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಹಿರಿಯ ಅಧಿಕಾರಿಯನ್ನು ಹೊರತುಪಡಿಸಿ ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತಲಾ ಇಬ್ಬರು ಅಧಿಕಾರಿಗಳನ್ನು ಒಳಗೊಂಡಿರುತ್ತದೆ ಎಂದು ಅದು ನಿರ್ದೇಶಿಸಿದೆ.

   ಕಲಬೆರಕೆ ತುಪ್ಪ ಸೇರಿದಂತೆ ‘ಲಡ್ಡು ಪ್ರಸಾದ’ ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮಾಡಿರುವ ಆರೋಪಗಳು ಭಕ್ತರಲ್ಲಿ ತೀವ್ರ ಕಳವಳ ಮೂಡಿಸಿದೆ. ಈ ಪವಿತ್ರ ನೈವೇದ್ಯದ ಪಾವಿತ್ರ್ಯತೆಗೆ ಕಳಂಕ ತಂದಿದೆ ಎಂದು ಪಾಲ್ ತಮ್ಮ ಪಿಐಎಲ್‌ನಲ್ಲಿ ಹೇಳಿಕೊಂಡಿದ್ದರು.

  ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಾದ್ಯಂತದ ಹಿಂದೂಗಳ ದೇವಾಲಯಗಳಲ್ಲಿ ಒಂದಾಗಿದೆ. ಲಡ್ಡು ಪ್ರಸಾದವು ಎಲ್ಲಾ ಹಿಂದೂಗಳಿಗೆ ಅಪಾರ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

Recent Articles

spot_img

Related Stories

Share via
Copy link