ನವದೆಹಲಿ:
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಹೇಳಿಕೆ ಫೋಸ್ಟ್ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಜುಲೈ 4 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ರೇಖಾ ಶರ್ಮಾ ಆಗಮಿಸುತ್ತಿರುವುದನ್ನು ತೋರಿಸುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮೊಯಿತ್ರಾ, ‘ತನ್ನ ಬಾಸ್ ನ ಪೈಜಾಮವನ್ನು ಹಿಡಿದುಕೊಳ್ಳುವಲ್ಲಿ ನಿರತಳಾಗಿದ್ದಾರೆ’ ಎಂದು ಬರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ತಮ್ಮ ಫೋಸ್ಟ್ ನ್ನು ಡಿಲೀಟ್ ಮಾಡಿದ್ದರು. ಮೂಲ ಫೋಸ್ಟ್ ನಲ್ಲಿ ಒಬ್ಬ ವ್ಯಕ್ತಿ ಕೊಡೆ ಹಿಡಿದುಕೊಂಡು ರೇಖಾ ಶರ್ಮಾ ಅವರ ಹಿಂದೆ ನಡೆಯುವುದನ್ನು ಕಾಣಬಹುದಾಗಿದೆ.
ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದ ಕೆಲಸ, ಸನ್ನೆ ಅಥವಾ ಕೃತ್ಯಕ್ಕೆ ಸಂಬಂಧಿಸಿದೆ.