ಬೆಂಗಳೂರು :
ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರ‍್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ಆಗ್ರಹಿಸಿ ಆಟೋ ಚಾಲಕರು ಇಂದು ಮಾ.20 ನಗರದಲ್ಲಿ ಆಟೋ ಸಂಚಾರ ಬಂದ್ ಮಾಡಲಿದ್ದಾರೆ.
ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಬಂದ್‌ಗೆ ಕರೆ ನೀಡಲಾಗಿದ್ದು, ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ನಗರದಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಬಂದ್‌ನಲ್ಲಿ 21 ಆಟೋ ಚಾಲಕರ ಸಂಘಟನೆಗಳು ಪಾಲ್ಗೊಳ್ಳಲಿದ್ದು, ಆಟೋ ಸಂಚಾರವಿಲ್ಲದೆ ಜನ ಸಾಮಾನ್ಯರು ತೊಂದರೆ ಎದುರಿಸಬೇಕಾಗಲಿದೆ.
ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ, ರಾಜ್ಯ ಸರ್ಕಾರಕ್ಕೆ ನೀಡಿದ್ದ ಮೂರು ದಿನಗಳ ಗಡುವು ಮುಗಿದ ಹಿನ್ನೆಲೆಯಲ್ಲಿ ಬಂದ್ ನಡೆಸಿ ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ನಿರ್ಧಾರ ಕೈಗೊಂಡಿದ್ದಾರೆ. ಮೂರು ದಿನಗಳ ಕಾಲ ಆಟೋ ಚಾಲಕರು ಕಪುö್ಪ ಪಟ್ಟಿ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ ಸರ್ಕಾರ ಮಾತ್ರ ಈ ಕುರಿತು ಮಾತಾಡಿಲ್ಲ. ಈ ಕಾರಣ ಬೆಂಗಳೂರಿನ 21 ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ.
ಬಂದ್‌ನಿಂದಾಗಿ ನಗರದಲ್ಲಿ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಇಂದು ಬಂದ್ ಆಗುತ್ತೆ ಎಂದು ಸಂಘದ ಮುಖಂಡರು ಹೇಳಿದ್ದಾರೆ.ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಚುನಾವಣೆಯೊಳಗೆ ಚಾಲಕರಿಗೆ ಸಿಹಿ ಸುದ್ದಿ ಕೊಡುತ್ತೇವೆ ಎಂಬ ಭರವಸೆ ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ