ನವದೆಹಲಿ:
ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ.
ಈ ಇಬ್ಬರಿಂದ ಪಂದ್ಯ ಸೋತೆವು; 205 ರನ್ ಗಳಿಸಿಯೂ ಪಂಜಾಬ್ ವಿರುದ್ಧ ಸೋತಿದ್ದೇಕೆ ಎಂಬುದನ್ನು ಬಿಚ್ಚಿಟ್ಟ ಫಾಫ್
ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ. ಇಂದು ಮತ್ತು ನಾಳೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.
ಬಿಡುಗಡೆಯಾದ ಬೆನ್ನಲ್ಲೇ ದಾಖಲೆ ಬರೆದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ಟ್ರೈಲರ್
ರೈಲ್ವೇ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ಕೂಡ ಮುಷ್ಕರವನ್ನು ಬೆಂಬಲಿಸಿವೆ. ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ ಮತ್ತು ವಿಮೆಯಂತಹ ವಿವಿಧ ಕ್ಷೇತ್ರಗಳ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಅನೇಕ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಮುಷ್ಕರದಿಂದ ಬ್ಯಾಂಕ್ ನಲ್ಲಿ ಕೆಲಸವು ಸೀಮಿತ ಪ್ರಮಾಣದಲ್ಲಿರಲಿದ್ದು, ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಉಳಿದಂತೆ ಮುಷ್ಕರದ ನಡುವೆ ಎಂದಿನಂತೆ ಕಚೇರಿ ಕೆಲಸಗಳು ನಡೆಯಲಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ