ಲೋಕಸಭೆ ಚುನಾವಣೇ : ಅಭ್ಯರ್ಥಿಗಳ ಆಯ್ಕೆಗೆ ಇಂದು ಬಿಜೆಪಿ ಸಭೆ

ದೆಹಲಿ 

    ಎಂಪಿ ಅಭ್ಯರ್ಥಿಗಳ ಆಯ್ಕೆಗೆ ಇಂದು ಬಿಜೆಪಿ ಸಭೆ ನಡೆಸಲಿದೆ. ಎರಡನೇ ಪಟ್ಟಿಯಲ್ಲಿ 18-20 ಸ್ಥಾನ ಅಂತಿಮಗೊಳಿಸುವ ಸಾಧ್ಯತೆ ಇದ್ದು ಪಟ್ಟಿಗೂ ಮುನ್ನ ಎಚ್‌ಡಿಕೆ ಜೊತೆ ಚರ್ಚೆ ನಡೆಸುವ ಸಂಭವವಿದೆ.

   ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಸೋಮವಾರ ನಡೆಯಲಿದೆ. ಭಾನುವಾರ ನಿಗದಿಯಾಗಿದ್ದ ಸಭೆ ಕೊನೆ ಕ್ಷಣದಲ್ಲಿ ರದ್ದಾಗಿತ್ತು. ಇದೀಗ ಸೋಮವಾರ ಅಂದರೆ ಇಂದು ಸಂಜೆ ಸಭೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

   ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಪೈಕಿ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

   ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಚುನಾವಣಾ ಸಮಿತಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಇಂದು ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ.

   ಆದರೆ ಇಂದು ಚುನಾವಣಾ ಸಮಿತಿ ಸಭೆ ಬಳಿಕ ಅರ್ಭಯರ್ಥಿಗಳ ಎರಡನೇ ಪಟ್ಟಿ ಪ್ರಕಟಗೊಳ್ಳುವುದೇ ಅಥವಾ ಒಂದೆರಡು ದಿನ ವಿಳಂಬವಾಗುವುದೇ ಎಂಬುದನ್ನು ಕಾದು ನೋಡಬೇಕು.

    ಇದೇ ವೇಳೆ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಮೊದಲು ರಾಜ್ಯದಲ್ಲಿ ಜೆಡಿಎಸ್‌ ಜೊತೆಗಿನ ಸ್ಥಾನ ಹೊಂದಾಣಿಕೆ ಬಗ್ಗೆ ಅಧಿಕೃತವಾಗಿ ಉಭಯ ಪಕ್ಷಗಳ ನಾಯಕರ ನಡುವೆ ಚರ್ಚೆ ನಡೆಯಬಹುದು. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರನ್ನೂ ದೆಹಲಿಗೆ ಕರೆಸಿಕೊಂಡು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

   ಕಳೆದ ವಾರ ಬಿಡುಗಡೆಗೊಂಡ ಬಿಜೆಪಿಯ ಮೊದಲ ಪಟ್ಟಿಯಲ್ಲಿ 195 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಆದರೆ, ಆ ಪಟ್ಟಿಯಲ್ಲಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವೂ ಇರಲಿಲ್ಲ. ಇದೀಗ ಎರಡನೇ ಪಟ್ಟಿಯಲ್ಲಿ ರಾಜ್ಯದ ಮುಕ್ಕಾಲು ಭಾಗದಷ್ಟು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಿಸುವ ಸಾಧ್ಯತೆಯಿದೆ.

  ಕಳೆದ ಬುಧವಾರ ಮತ್ತು ಗುರುವಾರ ಎರಡೂ ದಿನಗಳ ಕಾಲ ರಾಜ್ಯ ಬಿಜೆಪಿ ನಾಯಕರು ಕೇಂದ್ರ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದ್ದರು. ಈ ವೇಳೆ ಹಲವು ಕ್ಷೇತ್ರಗಳಿಗೆ ಹೊಸಬರನ್ನು ಕಣಕ್ಕಿಳಿಸುವ ಬಗ್ಗೆ ಕೇಂದ್ರ ನಾಯಕರು ಪ್ರಸ್ತಾಪ ಮಾಡಿದ್ದರೂ ಅದಕ್ಕೆ ರಾಜ್ಯ ನಾಯಕರು ಸಹಮತ ಸೂಚಿಸಿರಲಿಲ್ಲ. ಹೊಸ ಪ್ರಯೋಗ ಮಾಡದೆ ಗೆಲ್ಲುವ ಮಾನದಂಡ ಆಧರಿಸಿ ಟಿಕೆಟ್ ನಾಇಡುವುದು ಸೂಕ್ತ ಎಂಬ ಅಭಿಪ್ರಾಯ ನೀಡಿದರು.

   ಒಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು ಎಲ್ಲಾ ಲೆಕ್ಕಾಚಾರದ ಮೇಲೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap