ಸದ್ಯಕ್ಕೆ ಟೋಲ್‌ ಸಂಗ್ರಹವಿಲ್ಲ : ಪ್ರತಾಪ್ ಸಿಂಹ

ಮೈಸೂರು:  

    ಬಹು ನಿರೀಕ್ಷಿತ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮೊದಲ ಹಂತದ ಟೋಲ್ ಸಂಗ್ರಹಕ್ಕೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕಲಾಗಿದೆ  ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

    ಟೋಲ್‌ ಸಂಗ್ರಹದ  ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹಂಚಿಕೊಂಡಿರುವ, ಪ್ರತಾಪ್ ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

     ಮಾರ್ಚ್ 15ರ ನಂತರ ಟೋಲ್ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಅವಕಾಶವಿರಲಿದೆ. ಸರ್ವೀಸ್ ರಸ್ತೆ ಪೂರ್ಣಗೊಂಡ ಬಳಿಕ ಅಪಘಾತ ಮುಕ್ತ ರಸ್ತೆಯನ್ನಾಗಿಸುವ ಉದ್ದೇಶದಿಂದಾಗಿ ಅವುಗಳಿಗೆ ಅವಕಾಶ ಕೊಡುವುದಿಲ್ಲ. ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳು ಸರ್ವೀಸ್ ರಸ್ತೆಯನ್ನು ಬಳಸಿಕೊಳ್ಳಬಹುದು. ಇದರಿಂದ ಅವರು ಟೋಲ್ ಪಾವತಿಸುವುದು ಕೂಡಾ ತಪ್ಪಲಿದೆ ಎಂದು ತಿಳಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap